ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ರಿವಾಲ್ವರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ.

ರಾಜ್ಯ