ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.
ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
add a comment