ರಾಜ್ಯ

ಕಾರ್ಕಳ: ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಅರಣ್ಯ ಚೆಕ್ ಪೋಸ್ಟ್ ಬಳಿ ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡುವ ಯತ್ನ ನಡೆಸುತ್ತಿದ್ದ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿ ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಎಂದು ತಿಳಿದು ಬಂದಿದೆ.

ಅರಣ್ಯಾಧಿಕಾರಿಗಳು ಗುಂಪಿನ ಮೇಲೆ ದಾಳಿ ನಡೆಸಿದಾಗ ಸುಮಾರು ಐದರಿಂದ ಆರು ಮಂದಿ ರೈಫಲ್‌ನೊಂದಿಗೆ ಶಸ್ತ್ರಸಜ್ಜಿತರಾಗಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಕಾರಿನಲ್ಲಿ ಕಾಯುತ್ತಿದ್ದರು. ಈ ಸಂದರ್ಭ ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿಯ ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇತರರು ಕಾರು ಗನ್ ನೊಂದಿಗೆ ಪರಾರಿಯಾಗಿದ್ದಾರೆ.

ಶಂಕರನಾರಾಯಣ ಅರಣ್ಯ ಪ್ರದೇಶದಲ್ಲಿ ಎರಡು ಕಾಡೆಮ್ಮೆಗಳನ್ನು ಬೇಟೆಯಾಡಿದ ಆರೋಪ ಪಾಸ್ವಿಮ್ ಅಲಿ ಮೇಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈತನ ವಿರುದ್ಧ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಯತ್ನಿಸಿದ ಆರೋಪ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Response

error: Content is protected !!