ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ

ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ

ಮಡಿಕೇರಿ : ಅಂಚೆ ಇಲಾಖೆಯಲ್ಲಿ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 7 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ.

ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ಸಂದೇಶ ಎಂ.ಬಿ. ಶಿಕ್ಷೆಗೊಳಗಾದವರು.

2019ನೇ ಸಾಲಿನಲ್ಲಿ ಅಂಚೆ ಇಲಾಖೆಯ ನೇಮಕಾತಿಯಲ್ಲಿ ಆನ್‌ಲೈನ್‌ ಮೂಲಕ ಸಂದೇಶ ಅರ್ಜಿ ಸಲ್ಲಿಸಿದ್ದ. ದಾಖಲೆ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದಿರುವುದು ಪತ್ತೆಯಾಗಿತ್ತು. ಈ ಕುರಿತು ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸ ಲಾಗಿತ್ತು. 2022ರ ಫೆ.25 ರಂದು ಸಂದೇಶನನ್ನು ಬಂಧಿಸಲಾಗಿತ್ತು.

ರಾಜ್ಯ