ರಾಜ್ಯ

ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಡೀಸೆಲ್ ಲೋಡ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಈ ಘಟನೆಯ ಪರಿಣಾಮ ಗಂಟೆಗಳಿಗೂ ಅಧಿಕ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಟ್ಯಾಂಕರ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.

ಮಂಗಳೂರಿನಿಂದ ಚೆನ್ನೈಗೆ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಚಾಲಕ ಕಲ್ಲಡ್ಕ ಸರ್ವೀಸ್ ರೋಡ್ ನಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಎಡವಟ್ಟು ಮಾಡಿಕೊಂಡು ಕೊನೆಗೆ ಚರಂಡಿಗೆ ಪಲ್ಟಿಯಾಗಿದೆ.

ಪಲ್ಟಿಯಾದ ಕೂಡಲೇ ಟ್ಯಾಂಕರ್ ನಲ್ಲಿ ಸಣ್ಣ ತೂತಾಗಿದ್ದು, ಅ ಮೂಲಕ ಡಿಸೇಲ್ ಸೋರಿಕೆ ಕಂಡುಬಂದಿದೆ. ಹಾಗಾಗಿ ಕೆಲಹೊತ್ತು ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು. ಲಾರಿ ಪಲ್ಟಿಯಾದ ಕಾರಣ ಸುಮಾರು ಒಂದು ಗಂಟೆಗಳ ಕಾಲ ವಾಹನಗಳು ಅಲ್ಲೇ ಬಾಕಿಯಾಗಿದ್ದವು.

Leave a Response

error: Content is protected !!