6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಿಹಾರಿಯ ಅಟ್ಟಹಾಸ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಿಹಾರಿಯ ಅಟ್ಟಹಾಸ

ಬೆಂಗಳೂರು : ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ನಡೆದಿದ್ದು, ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.

ಈ ಘಟನೆ ಸಂಬಂಧಸಿದಂತೆ ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು. ಪೂರ್ವ ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರ ಮೂಲದಅಭಿಷೇಕ್ ಕುಮಾರ್ ಬಂಧನವನ್ನು ಪೂರ್ವ ಪೊಲೀಸ್ ಉಪ ಆಯುಕ್ತ ಡಿ ದೇವರಾಜ್ ಖಚಿತಪಡಿಸಿದ್ದಾರೆ. ಶಂಕಿತ ವ್ಯಕ್ತಿ ಬಿಹಾರ ಮೂಲದ ಕಾರ್ಮಿಕ ಎಂದು ದೇವರಾಜ್ ತಿಳಿಸಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ರಾಜ್ಯ