ಧಾರ್ಮಿಕ

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಬೆಂಕಿ ಅವಘಡ

ಪ್ರಯಾಗ್‌ರಾಜ್ ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ ಭಾನುವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ. 20-25 ಶಿಬಿರಗಳು ಬೆಂಕಿಗೆ ಆಹುತಿಯಾದರೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ತಕ್ಷಣ ಕ್ರಮ ಕೈಗೊಂಡರು. ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ.

Leave a Response

error: Content is protected !!