ಅಪರಾಧರಾಜ್ಯ

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ: 14 ಮಂದಿ ಅರೆಸ್ಟ್

ಮಂಗಳೂರು: ಬಿಜೈ ನಲ್ಲಿ ನಡೆದ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಕುಡುಪು ಬಳಿಯ ಮನೆಯಿಂದಲೇ ಎಳೆದೊಯ್ದು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ ಕಾರ್ಯಕರ್ತರಾದ ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ ಅವರನ್ನು ಬಂಧಿಸಿದ್ದಾರೆ.

ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು ಮಧ್ಯಾಹ್ನ ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ದಾಳಿ ನಡೆಸಿದ್ದರು.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿಸಿದ್ದು, ಬಳಿಕ ರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಹಾಗೂ 13 ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Leave a Response

error: Content is protected !!