ರಾಜ್ಯ

ಉಡುಪಿ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಉಡುಪಿ : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ.

ಆರೋಪಿ ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮತ್ತೊಂದು ಬಾಲಕಿ ಸ್ಥಳಕ್ಕೆ ಆಗಮಿಸಿದ್ದ ವೇಳೆ ಆರೋಪಿ ಪರಾರಿಯಾಗಿದ್ದ, ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಆರೋಪಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಸಾರ್ವಜನಿಕರಲ್ಲಿ ಮಾಹಿತಿಗಾಗಿ ಮನವಿ ಮಾಡಲಾಗಿತ್ತು, ಅಲ್ಲದೆ ಪೊಲೀಸರು ಆರೋಪಿಯ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಿದ್ದರು.
ಸಾರ್ವಜನಿಕರ ಸಹಾಯ ಮತ್ತು ಪೊಲೀಸ್‌ ಅಧಿಕಾರಿ, ಸಿಬ್ಬಂದಿಗಳ ಸತತ ಪ್ರಯತ್ನದಿಂದ, ಜನವರಿ 26ರಂದು ಸಂಜೆ ಆರೋಪಿ ಮುತ್ತುನನ್ನು ಶ್ರೀಕೃಷ್ಣ ಮಠದ ಪರಿಸರದ ವಾದೀರಾಜ 3ನೇ ಕ್ರಾಸ್‌ ಬಳಿ ಬಂಧಿಸಲಾಯಿತು. ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Leave a Response

error: Content is protected !!