ರಾಜ್ಯ

ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ

ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು, ಇದನ್ನು ಗಮನಿಸಿದ ಶಾಲೆಯವರು ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಮೈದಾನದಲ್ಲಿ ಇರಿಸಿದ್ದಾರೆ.

ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಬಾಂಬ್​ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ. ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

error: Content is protected !!