ರಾಷ್ಟ್ರೀಯ

ಮಹಾಕುಂಭಮೇಳ : ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಬೂದಿ ಬೆರೆಸಿದ ಪೊಲೀಸ್

ಪ್ರಯಾಗರಾಜ್‌ : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ಬೂಗಿಯನ್ನು ಬೆರೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಮಹಾ ಕುಂಭ ಮೇಳ ಆರಂಭಗೊಂಡಿದ್ದು ದೇಶದಾದ್ಯಂತ ಕೋಟ್ಯಾಂತರ ಭಕ್ತರು ಈ ಒಂದು ಪುಣ್ಯ ಸ್ಥಳಕ್ಕೆ ಬಂದು ಪವಿತ್ರ ಸ್ನಾನ ಮಾಡುತ್ತಿದ್ದಾರೆ, ಹಾಗೆ ಬರುವ ಭಕ್ತರಿಗೆಂದೇ ಆಹಾರ, ಕುಡಿಯಲು ನೀರಿನ ವ್ಯವಸ್ಥೆಯನ್ನು అల్లల్లి ಮಾಡಲಾಗಿದೆ. ಹೀಗಿರುವುದು ಗೊತ್ತಿದ್ದರೂ ಇಲ್ಲೊಬ್ಬ ಪೊಲೀಸ್ ಅಧಿಕಾರಿ ಭಕ್ತರಿಗೆಂದು ತಯಾರಿಸಲಾದ ಅಡುಗೆಗೆ ಬೂದಿ ಎರಚುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾನೆ.

ಪೊಲೀಸ್ ಅಧಿಕಾರಿಯ ಕೃತ್ಯ ಅಲ್ಲಿದ್ದ ವ್ಯಕ್ತಿಯೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ, ಸೊರನ್ನ ಠಾಣಾಧಿಕಾರಿ ಬ್ರಿಜೇಶ್ ಕುಮಾರ್ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಕುಲದೀಪ್ ಸಿಂಗ್ ಗುಣವತ್ ಹೇಳಿದ್ದಾರೆ. ಒಲೆಯ ಮೇಲೆ ತಯಾರಿಸಲಾಗುತ್ತಿದ್ದ ಆಹಾರಕ್ಕೆ ಪೊಲೀಸ್ ಅಧಿಕಾರಿಯು ಬೂದಿಯನ್ನು ಸೇರಿಸುತ್ತಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ.

Leave a Response

error: Content is protected !!