ಪುಣೆಯಲ್ಲಿ ನಿನ್ನೆ ನಡೆದ ಭಾರತ-ಇಂಗ್ಲೆಂಡ್ ನಾಲ್ಕನೇ T20 ಪಂದ್ಯದಲ್ಲಿ ಭಾರತವು 15 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ, 3-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 181/9 ರನ್ ಗಳಿಸಿತು. ಹಾರ್ದಿಕ್ ಪಾಂಡ್ಯ ಹಾಗೂ ಮತ್ತು ಶಿವಮ್ ದುಬೆ ತಲಾ 53 ರನ್ ಗಳಿಸಿ ಇಂಗ್ಲೆಂಡ್ ಗೆ ಉತ್ತಮ ಗುರಿಯನ್ನು ನೀಡುವಲ್ಲಿ ನೆರವಾದರು. 182 ರನ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 166 ರನ್‌ಗಳಿಗೆ ಆಲೌಟ್ ಆಯಿತು. ಬೌಲಿಂಗ್ನಲ್ಲಿ ಮಿಂಚಿದ ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
add a comment