ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಅವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದು, ಗಂಗೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಮಹಾಕುಂಭ 2025 ಪೌಷ್ ಪೂರ್ಣಿಮಾ (ಜನವರಿ 13, 2025) ರಂದು ಪ್ರಾರಂಭವಾಗಿದ್ದು, ಇದು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹಾ ಸಂಗಮವಾಗಿದೆ. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರೋತ್ಸಾಹಿಸುವ ಮತ್ತು ಸಂರಕ್ಷಿಸುವ ಬದ್ಧತೆಯನ್ನು ಮುಂದುವರಿಸಿರುವ ಪ್ರಧಾನಮಂತ್ರಿಯವರು, ಯಾತ್ರಾ ಕೇಂದ್ರಗಳಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ನಿರಂತರ ಪ್ರಯತ್ನಗಳನ್ನು ಮಾಡಿದ್ದಾರೆ.
ಈ ಹಿಂದೆ, 2024 ಡಿಸೆಂಬರ್ 13 ರಂದು ಪ್ರಯಾಗರಾಜ್‌ಗೆ ಭೇಟಿ ನೀಡಿದಾಗ, ಪ್ರಧಾನಮಂತ್ರಿ ಅವರು ₹5,500 ಕೋಟಿ ಮೊತ್ತದ 167 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು, ಇದರಿಂದ ಸಂಪರ್ಕ ವ್ಯವಸ್ಥೆ, ಸೌಲಭ್ಯಗಳು ಮತ್ತು ಸಾರ್ವಜನಿಕ ಸೇವೆಗಳಲ್ಲಿ ಮಹತ್ತರ ಸುಧಾರಣೆ ಸಾಧ್ಯವಾಗಿದೆ.