ರಾಜ್ಯ

ಶಾಲಾ ಮಕ್ಕಳಲ್ಲಿ ಚಿಕನ್ ಪಾಕ್ಸ್ ಆತಂಕ; ಕಡಬ ಮತ್ತು ಸುಳ್ಯ ತಾಲೂಕಿನ 21 ಮಕ್ಕಳಿಗೆ ಸೋಂಕು

ಕಡಬ ತಾಲೂಕಿನಲ್ಲಿ ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದ್ದು, ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಆವರಿಸಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದು ಯಾರು ಗಾಬರಿಯಾಗ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದ್ದು, ಮಕ್ಕಳ ಆರೋಗ್ಯದ ಮಾಹಿತಿ ಪಡೆಯಲಾಗಿದೆ. ಮಕ್ಕಳಲ್ಲಿ ಕಾಯಿಲೆ ವಾಸಿಯಾಗುತ್ತಿದ್ದು, ಇದು ಸಾಮಾನ್ಯವಾಗಿ ಗುಣವಾಗುವ ಕಾಯಿಲೆ ಎಂದು ಹೇಳಿದ್ದಾರೆ.

ಚಿಕನ್ ಪಾಕ್ಸ್ ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವ ಕಾರಣ ಮಕ್ಕಳಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಗಳನ್ನು ಹಂಚಲಾಗಿದೆ. ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿರುವುದಾಗಿ ಹೇಳಿದ್ದಾರೆ.

Leave a Response

error: Content is protected !!