ಕಟಕ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ 4 ವಿಕೆಟ್ ಜಯ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ.


ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, 304 ರನ್ ಗಳಿಸಿತು. ರವೀಂದ್ರ ಜಡೇಜಾ (3/35) ಅವರ ತೀಕ್ಷ್ಣ ಬೌಲಿಂಗ್ ದಾಳಿಯ ನಡುವೆ ಇಂಗ್ಲೆಂಡ್ ದೊಡ್ಡ ಮೊತ್ತ ಕಲೆಹಾಕಿದರೂ, ಅದು ಭಾರತದ ಆಟಗಾರರನ್ನು ತಡೆಯಲು ಸಾಧ್ಯವಾಗಿಲ್ಲ.


ರೋಹಿತ್ ಶರ್ಮಾ (119 ರನ್, 90 ಎಸೆತ, 12 ಬೌಂಡರಿ, 7 ಸಿಕ್ಸರ್) ಅವರು ಭರ್ಜರಿ ಬ್ಯಾಟಿಂಗ್ ಮಾಡಿದರು. ಈ ಶತಕದೊಂದಿಗೆ, ಅವರು ಭಾರತದ ಪರ ಅತಿಹೆಚ್ಚು ಅಂತಾರಾಷ್ಟ್ರೀಯ ಶತಕಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಮೀರಿಸಿದರು.
ಈಗ ಅವರು ವಿರಾಟ್ ಕೊಹ್ಲಿ (81) ಮತ್ತು ಸಚಿನ್ ತೆಂಡೂಲ್ಕರ್ (100) ಅವರ ನಂತರ ಮೂರನೇ ಸ್ಥಾನದಲ್ಲಿದ್ದಾರೆ.ಇನ್ನು ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ 332 ಸಿಕ್ಸರ್ಗಳೊಂದಿಗೆ ಕ್ರಿಸ್ ಗೇಲ್ (331) ಅವರನ್ನು ಹಿಂದಿಕ್ಕಿದ್ದಾರೆ. ಶಾಹಿದ್ ಅಫ್ರಿದಿ (351) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆಲ್ಲುವ ಮೂಲಕ ಭವಿಷ್ಯದ ಟೂರ್ನಿಗಳಿಗಾಗಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ.