ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ

ಮೊನ್ನೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯ ನಡುವೆ ಶಿವಮೊಗ್ಗ ಹಾಗೂ ಬೀದರ್ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಪವಿತ್ರ ಯಜ್ಞೋಪವೀತ) ತೆಗೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಘಟನೆ ಸಂಬಂಧಿಸಿ ಶ್ರೀ ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷರು ಡಾ.ಗಿರಿಧರ ಕಜೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅವರು ಈ ನಿರ್ಲಕ್ಷ್ಯ ಕೃತ್ಯವನ್ನು ಧರ್ಮ, ಸಂಸ್ಕೃತಿ, ವ್ಯಕ್ತಿತ್ವದ ವಿರುದ್ಧ ನಡೆದ ಕೃತ್ಯವೆಂದು ಹೇಳಿದ್ದು, ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಪರಾಧ ಧಾರ್ಮಿಕ ಶೈಕ್ಷಣಿಕ