ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಸೇನೆಗೆ ಫ್ರೀ ಹ್ಯಾಂಡ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟನೆ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಸೇನೆಗೆ ಫ್ರೀ ಹ್ಯಾಂಡ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟನೆ

ಪಾಕಿಸ್ತಾನದಿಂದ ನಿರಂತರವಾಗುತ್ತಿರುವ ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ ಭಾರತದ ರಕ್ಷಣಾ ಇಲಾಖೆಯು ತೀವ್ರ ಕ್ರಮಗಳನ್ನು ಕೈಗೊಂಡಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಮಾತನಾಡುತ್ತಾ, “ಸೇನೆಗೆ ಸಂಪೂರ್ಣ ಫ್ರೀ ಹ್ಯಾಂಡ್ ನೀಡಲಾಗಿದೆ” ಎಂದು ಹೇಳಿದ್ದಾರೆ.

ಜಮ್ಮು, ಕಚ್, ರಜೌರಿ, ಶ್ರೀನಗರ, ಪಠಾಣ್‌ಕೋಟ್, ರಾಜಸ್ಥಾನ ಮುಂತಾದ ಗಡಿಭಾಗಗಳಲ್ಲಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದ್ದು, ಈ ದಾಳಿಗೆ ತಕ್ಷಣವೇ ತಿರುಗೇಟು ನೀಡಲಾಗಿದೆ. ಶ್ರೀನಗರದಲ್ಲಿ ಯಾವುದೇ ಸ್ಪೋಟವಾಗಿಲ್ಲ ಎಂಬುದನ್ನು ಭಾರತೀಯ ಸೇನೆ ಖಚಿತಪಡಿಸಿದೆ. ಸುರಕ್ಷತೆಯ ದೃಷ್ಟಿಯಿಂದ ಗಡಿಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಕದನ ವಿರಾಮ ಘೋಷಣೆಯಾದ ನಾಲ್ಕು ಗಂಟೆಗಳಲ್ಲಿಯೇ ಪಾಕಿಸ್ತಾನವು ತನ್ನ ನಿಜಸ್ವರೂಪ ತೋರಿಸಿಕೊಂಡಿದೆ. ಕಳೆದ ಕೆಲವು ಗಂಟೆಗಳಿಂದ ಪಾಕಿಸ್ತಾನ ನಿರಂತರವಾಗಿ ಉಲ್ಲಂಘನೆ ಮಾಡುತ್ತಿದ್ದು, ಸೇನೆಗೆ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ನೇರ ಆದೇಶವಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ನಡೆಸಲಿದ್ದಾರೆ. ಇದರ ನಡುವೆ, ಪಾಕಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸಿರುವ ಚೀನಾದ ವಿದೇಶಾಂಗ ಮಂತ್ರಿ ವಾಂಗ್ ಯಿ ಜೊತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂಬ ವರದಿ ಬಂದಿದೆ.

ಅಂತರಾಷ್ಟ್ರೀಯ