ರಾಜ್ಯದಲ್ಲಿ ಭಾರೀ ಸಂಚಲನ ಮಾಡಿದ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಇಂದು ನ್ಯಾಯಾಲಯದಿಂದ ತೀರ್ಪು ಬಂದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಈ ಪ್ರಕರಣದ ಹಿನ್ನೆಲೆ ಏಪ್ರಿಲ್ 26-27, 2024 ರಂದು ಮಹಿಳಾ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿರುದ್ಧ ನೀಡಲಾದ ದೂರಿನಿಂದ ಆರಂಭವಾಯಿತು. ಮೇ 31 ರಂದು ಬೆಂಗಳೂರಿನಲ್ಲಿ ಬಂಧನವಾದ ಬಳಿಕ, ಜೂನ್ 2024 ರಲ್ಲಿ ವಿಚಾರಣೆ ಪ್ರಾರಂಭವಾಯಿತು. ಜೂನ್ 24 ರಂದು ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆಯು ನಡೆಯಿತು.
ವಿಚಾರಣೆಯ ಭಾಗವಾಗಿ ಸಿಡಿ, ಪೆನ್‌ಡ್ರೈವ್ ಮತ್ತು ಸಾಕ್ಷ್ಯ ವಸ್ತುಗಳ ಪರಿಶೀಲನೆಯು ನಡೆದಿತ್ತು. ತನಿಖಾ ಸಂಸ್ಥೆಗಳ ವರದಿ ಮತ್ತು ಸಂತ್ರಸ್ತೆಯ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಾಧೀಶರು, ಆರೋಪಿಗೆ ಶಿಕ್ಷೆ ವಿಧಿಸಿದರು.
ಆಗಸ್ಟ್ 1, 2025 ರಂದು ಕೊನೆಗೂ ದೋಷಿ ಎಂದು ತೀರ್ಪು ನೀಡಿದ್ದು, ಇಂದು ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು 5 ಲಕ್ಷ ದಂಡ ನೀಡಲಾಗಿದೆ.
ಪ್ರಜ್ವಲ್ ರೇವಣ್ಣ ಅವರ ಕುಟುಂಬ ರಾಜಕೀಯವಾಗಿ ಪ್ರಬಲ ಹಿನ್ನೆಲೆ ಹೊಂದಿರುವ ಕಾರಣ, ಈ ತೀರ್ಪು ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.