ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಮಹಾದೇವಪುರ ಕ್ಷೇತ್ರದ ಮತದಾರ ಶಕುನ್ ರಾಣಿ ಎರಡು ಬಾರಿ ಮತಚಲಾಯಿಸಿದ್ದಾರೆಯೆಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಆಗಸ್ಟ್ 10ರಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸಾಕ್ಷ್ಯಾಧಾರ ಸಲ್ಲಿಸುವಂತೆ ನೋಟಿಸ್ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಕುನ್ ರಾಣಿ ಒಮ್ಮೆ ಮಾತ್ರ ಮತ ಚಲಾಯಿಸಿದ್ದರೆಂಬ ಮಾಹಿತಿ ಹೊರಬಂದಿದೆ.

ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, “ಅವರಿಗೆ ನಮಗೆ ನೋಟಿಸ್ ನೀಡುವ ಅಧಿಕಾರವಿಲ್ಲ. ನಮಗೇ ನೋಟಿಸ್ ನೀಡುವ ಅಧಿಕಾರವಿದೆ, ನಾವು ಅವರಿಗೆ ನೋಟಿಸ್ ನೀಡಿದ್ದೇವೆ,” ಎಂದು ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

