ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಪತ್ನಿಯಿಂದ ಕೌಟುಂಬಿಕ ದೌರ್ಜನ್ಯ ದೂರು

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಪತ್ನಿಯಿಂದ ಕೌಟುಂಬಿಕ ದೌರ್ಜನ್ಯ ದೂರು

ಬೆಂಗಳೂರು:
ಕನ್ನಡ ಚಿತ್ರರಂಗದ ಜನಪ್ರಿಯ ನಟ ಅಜಯ್ ರಾವ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಅವರ ಪತ್ನಿ ಸಪ್ನಾ, ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಮಗಳು ಚರಿಷ್ಮಾ ಸಹ ಈ ದೂರುದಲ್ಲಿ ಪತ್ನಿಯ ಜೊತೆಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಅಜಯ್ ರಾವ್ ಮತ್ತು ಸಪ್ನಾ ಪ್ರೀತಿಸಿ 2014ರ ಡಿಸೆಂಬರ್ 18ರಂದು ಹೊಸಪೇಟೆಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾದರು. 2019ರಲ್ಲಿ ಇವರಿಗೆ ಚರಿಷ್ಮಾ ಎಂಬ ಮಗಳು ಜನಿಸಿದರು. ಸುಮಾರು 11 ವರ್ಷಗಳ ದಾಂಪತ್ಯ ಜೀವನದ ಬಳಿಕ ಇದೀಗ ಇವರ ನಡುವೆ ಅಸಮಾಧಾನ ಬೆಳಕಿಗೆ ಬಂದಿದೆ.

2003ರಲ್ಲಿ ಬಿಡುಗಡೆಯಾದ ‘ಎಕ್ಸ್ಕ್ಯೂಸ್ ಮೀ’ ಸಿನಿಮಾದ ಮೂಲಕ ನಾಯಕ ನಟನಾಗಿ ಸಿನಿರಂಗ ಪ್ರವೇಶಿಸಿದ ಅಜಯ್ ರಾವ್, ಅದಕ್ಕೂ ಮುನ್ನ ಸುದೀಪ್ ನಟನೆಯ ‘ಕಿಚ್ಚ’ ಸಿನಿಮಾದಲ್ಲಿ ಸ್ನೇಹಿತನ ಪಾತ್ರದಲ್ಲಿ ಅಭಿನಯಿಸಿದ್ದರು. ನಂತರ ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಸೇರಿದಂತೆ ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದೇ ವರ್ಷ ಬಿಡುಗಡೆಯಾದ ‘ಯುದ್ಧಕಾಂಡ 2’ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣ ಕಾರ್ಯವನ್ನೂ ಅಜಯ್ ರಾವ್ ಕೈಗೊಂಡಿದ್ದರು.

ಅಪರಾಧ ಮನೋರಂಜನೆ ರಾಜ್ಯ