ಮಂಗಳೂರು, ಆ.17: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆಗಸ್ಟ್ 18ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಆಗಸ್ಟ್ 18ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ-ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
➡️ ಅಧಿಕಾರಿಗಳ ಸೂಚನೆಗಳು:
- ಮಕ್ಕಳು ನೀರು ತುಂಬಿದ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು.
- ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.
- ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಗಳಲ್ಲಿ ಹಾಜರಿದ್ದು, ವಿಪತ್ತು ನಿರ್ವಹಣೆಯನ್ನು ಚುರುಕುಗೊಳಿಸಬೇಕು.
- ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರ ತೀರಗಳಿಗೆ ತೆರಳಬಾರದು.
- ತಲಾ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ಸಜ್ಜುಗೊಳಿಸಬೇಕು.

📞 ತುರ್ತು ಸೇವೆಗಳಿಗಾಗಿ ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

