ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಆಗಸ್ಟ್ 31ರಂದು ಸಂಜೆ 4 ಗಂಟೆಗೆ ಮುಕ್ರಂಪಾಡಿ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಲಿದೆ.

ಪ್ರತೀ ವರ್ಷವೂ ಪುತ್ತೂರು ಮಹಾಲಿಂಗೇಶ್ವರನ ಮಣ್ಣಿನಲ್ಲಿ ವಿಜೃಂಭಣೆಯಿಂದ ನಡೆಯುವ ಈ ಮಹತ್ವದ ಕಾರ್ಯಕ್ರಮದ ಸಿದ್ಧತೆಯ ಭಾಗವಾಗಿ ನಡೆಯುವ ಪೂರ್ವಭಾವಿ ಸಭೆಗೆ ಸಮಸ್ತ ಹಿಂದೂ ಬಾಂಧವರನ್ನು ಆಹ್ವಾನಿಸಲಾಗಿದೆ.

