ನವದೆಹಲಿ, ಸೆ. 09:
ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಇಂದು ಪ್ರಕಟವಾದ ಉಪರಾಷ್ಟ್ರಪತಿ ಚುನಾವಣಾ ಫಲಿತಾಂಶದಲ್ಲಿ ಅವರು ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಿ. ಸುದರ್ಶನ ರೆಡ್ಡಿ ಅವರನ್ನು 152 ಮತಗಳ ಭರ್ಜರಿ ಅಂತರದಿಂದ ಸೋಲಿಸಿದರು.

ಒಟ್ಟು 781 ಮತಗಳಲ್ಲಿ 768 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ 452 ಮತಗಳು ಎನ್ಡಿಎ ಅಭ್ಯರ್ಥಿ ಪರವಾಗಿ ದಾಖಲಾಗಿದೆ. ಎನ್ಡಿಎ ಒಟ್ಟು ಸಂಖ್ಯಾಬಲ 427 ಆಗಿದ್ದರೂ, ರಾಧಾಕೃಷ್ಣನ್ ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಅವರು ಭರ್ಜರಿ ಬಹುಮತದೊಂದಿಗೆ ಉಪ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಬಿಜೆಡಿ ಮತ್ತು ಬಿಆರ್ಎಸ್ ಪಕ್ಷಗಳು ಮತದಾನದಿಂದ ದೂರ ಉಳಿದಿದ್ದು, ಒಟ್ಟು 13 ಸಂಸದರು ಮತ ಚಲಾಯಿಸಿಲ್ಲ. ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಈ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳ ಪೈಕಿ ರಾಧಾಕೃಷ್ಣನ್ ಸ್ಪಷ್ಟ ಅಂತರದ ಗೆಲುವು ಸಾಧಿಸಿದ್ದಾರೆ.

