ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಕುಟುಂಬದ ಮೇಲೆ ವರದಕ್ಷಿಣೆ ಕಿರುಕುಳದ ಆರೋಪ -ಎಫ್‌ಐಆರ್ ದಾಖಲು

ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಕುಟುಂಬದ ಮೇಲೆ ವರದಕ್ಷಿಣೆ ಕಿರುಕುಳದ ಆರೋಪ -ಎಫ್‌ಐಆರ್ ದಾಖಲು

ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ದೇಶಕ ಎಸ್.ನಾರಾಯಣ್, ಅವರ ಪತ್ನಿ ಭಾಗ್ಯಲಕ್ಷ್ಮಿ ಹಾಗೂ ಪುತ್ರ ಪವನ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, ಮದುವೆಯಲ್ಲಿ ವರದಕ್ಷಿಣೆ ನೀಡಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಪವಿತ್ರಾ ಆರೋಪಿಸಿದ್ದಾರೆ.

ದೂರು ವಿವರ:

  • ಪವಿತ್ರಾ ಮತ್ತು ಪವನ್ 2021ರಲ್ಲಿ ವಿವಾಹವಾಗಿದ್ದರು.
  • ಪವನ್ ಕೆಲಸವಿಲ್ಲದೆ ಮನೆಯಲ್ಲೇ ಇದ್ದ ಕಾರಣ ಪವಿತ್ರಾ ಉದ್ಯೋಗ ಮಾಡಿಕೊಂಡು ಕುಟುಂಬ ನಡೆಸುತ್ತಿದ್ದಳು.
  • ಬಳಿಕ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಲು ಪವಿತ್ರಾಳ ಬಳಿಯಿಂದ ಹಣ ಕೇಳಿದಾಗ, ತಾಯಿಯ ಒಡವೆಗಳನ್ನು ನೀಡಿ ಸಹಾಯ ಮಾಡಿದ್ದಳು. ಆದರೆ ಆ ಇನ್ಸ್ಟಿಟ್ಯೂಟ್ ಲಾಸ್‌ನಿಂದ ಮುಚ್ಚಬೇಕಾದ ಪರಿಸ್ಥಿತಿ ಬಂತು.
  • ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಮತ್ತು ಮದುವೆ ವೆಚ್ಚವನ್ನು ಪವಿತ್ರಾ ತಾನು ನೋಡಿಕೊಂಡಿದ್ದರೂ, ನಂತರ ಹೆಚ್ಚಿನ ಹಣಕ್ಕಾಗಿ ಒತ್ತಾಯ ಮಾಡುತ್ತ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಪವಿತ್ರಾ ದೂರಿನಲ್ಲಿ, “ಜಗಳದ ನಂತರ ನನ್ನನ್ನು ಮನೆಯಿಂದ ಹೊರಹಾಕಿದರು. ನನಗೆ ಹಾಗೂ ನನ್ನ ಮಗನಿಗೆ ಏನಾದರೂ ಆಗಿದ್ರೆ, ಇದಕ್ಕೆ ಇವರೇ ಕಾರಣ” ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿ ಪ್ರಕರಣವನ್ನು ತನಿಖೆ ಕೈಗೊಂಡಿದ್ದಾರೆ.

ಅಪರಾಧ ಮನೋರಂಜನೆ ರಾಜ್ಯ