🔴 ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ, ತುರ್ತು ಕ್ರಮ ಕೈಗೊಂಡ ಪೊಲೀಸರು

🔴 ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ, ತುರ್ತು ಕ್ರಮ ಕೈಗೊಂಡ ಪೊಲೀಸರು

ನವದೆಹಲಿ: ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ, ನ್ಯಾಯಾಲಯದ ಆವರಣವನ್ನು ತಕ್ಷಣ ಖಾಲಿ ಮಾಡಲಾಗಿದೆ.

ಬಾಂಬ್ ಪತ್ತೆ ದಳ, ಅಗ್ನಿಶಾಮಕ ದಳ ಹಾಗೂ ದೆಹಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಭದ್ರತಾ ಪರಿಶೀಲನೆ ನಡೆಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಪರಿಶೀಲನೆ ಪೂರ್ಣಗೊಳ್ಳುವವರೆಗೆ ಹೈಕೋರ್ಟ್‌ನ ಕಾರ್ಯಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಈ ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ಅಪರಾಧ ರಾಷ್ಟ್ರೀಯ