ಹಾಸನದಲ್ಲಿ ಗಣೇಶ ಮೆರವಣಿಗೆಯ ದುರಂತ: ಕ್ಯಾಂಟರ್‌ ನುಗ್ಗಿ 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನದಲ್ಲಿ ಗಣೇಶ ಮೆರವಣಿಗೆಯ ದುರಂತ: ಕ್ಯಾಂಟರ್‌ ನುಗ್ಗಿ 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ: ಹಾಸನ ತಾಲೂಕಿನ ಹೊಳೇನರಸೀಪುರ ಕ್ಷೇತ್ರದ ಮೊಸಳೆಹೊಸಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಭಾರೀ ಕ್ಯಾಂಟರ್‌ ಮೆರವಣಿಗೆಯ ನಡುವೆ ನುಗ್ಗಿ 8 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೆರವಣಿಗೆಯ ನಡುವೆ ಎದುರು ಬಂದ ಬೈಕ್‌ ಸವಾರನನ್ನು ರಕ್ಷಿಸಲು ಯತ್ನಿಸಿದ ವೇಳೆ ಕ್ಯಾಂಟರ್‌ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಭಕ್ತರ ಗುಂಪಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ತಕ್ಷಣವೇ ಜಿಲ್ಲಾಧಿಕಾರಿ, ಪೊಲೀಸ್‌ ಅಧಿಕಾರಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳೀಯರು ಕೂಡ ಗಾಯಾಳುಗಳನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್‌ಡಿ ರೇವಣ್ಣ ಸರ್ಕಾರ ಮತ್ತು ಪೊಲೀಸರ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಮೆರವಣಿಗೆಯ ಸಮಯದಲ್ಲಿ ಸೂಕ್ತ ಭದ್ರತೆ ನೀಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪರಾಧ ರಾಜ್ಯ