🔴 ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ – ಕೇಸ್ ದಾಖಲು

🔴 ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ – ಕೇಸ್ ದಾಖಲು

ನಟ ದರ್ಶನ್ ತೂಗುದೀಪ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಡುವೆ, ಅವರ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಮೈಸೂರಿನಲ್ಲಿ ಇದ್ದ ಸಮಯದಲ್ಲಿ, ಬೆಂಗಳೂರಿನ ಹೊಸಕೆರೆಹಳ್ಳಿ ಬಳಿ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿದ್ದ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳರು ನುಗ್ಗಿ ಸುಮಾರು 3 ಲಕ್ಷ ರೂಪಾಯಿ ನಗದು ದೋಚಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 4ರಿಂದ 8ರ ನಡುವೆ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿದೆ. ಸೆಪ್ಟೆಂಬರ್ 8ರಂದು ವಿಜಯಲಕ್ಷ್ಮಿ ಮೈಸೂರಿನಿಂದ ವಾಪಸ್ ಆಗಿ ಬಂದು ನೋಡಿದಾಗ, ಬೆಡ್‌ರೂಂನ ವಾರ್ಡ್‌ರೋಬ್‌ನಲ್ಲಿ ಇಟ್ಟಿದ್ದ ಹಣ ಕಾಣೆಯಾಗಿತ್ತು.

ಮನೆ ಕೆಲಸದವರನ್ನು ವಿಚಾರಿಸಿದಾಗ “ಗೊತ್ತಿಲ್ಲ” ಎಂದು ಉತ್ತರಿಸಿದ ಹಿನ್ನೆಲೆಯಲ್ಲಿ, ವಿಜಯಲಕ್ಷ್ಮಿ ಅವರು ಮನೆ ಕೆಲಸದವರ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈಗಾಗಲೇ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಅಪರಾಧ ರಾಜ್ಯ