ಮಂಗಳೂರು: ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳು ಸಮಸ್ಯೆಯನ್ನು ಬಗೆಹರಿಸಲು, ಜೊತೆಗೆ ಕಾಂಗ್ರೆಸ್ ಸರಕಾರದ ಜನ ವಿರೋಧಿ ಹಾಗೂ ಕಾರ್ಮಿಕ ವಿರೋಧಿ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಮಂಗಳೂರಿನಲ್ಲಿ ನಡೆಯಲಿದೆ.

ಈ ಪ್ರತಿಭಟನೆ ಸೆಪ್ಟೆಂಬರ್ 16, ಮಂಗಳವಾರ, ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮಿನಿ ವಿಧಾನಸೌಧ, ಮಂಗಳೂರುಯಲ್ಲಿ ಜರುಗಲಿದೆ.
ಕಾರ್ಮಿಕರು, ಜನಪ್ರತಿನಿಧಿಗಳು ಹಾಗೂ ಜನಸಾಮಾನ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿ ಎತ್ತುವಂತೆ ಕೋರಲಾಗಿದೆ.
ಈ ಪ್ರತಿಭಟನೆಗೆ ಕಿಶೋರ್ ಕುಮಾರ್ ಪುತ್ತೂರು, ವಿಧಾನ ಪರಿಷತ್ ಸದಸ್ಯರು ಮತ್ತು ಜಿಲ್ಲಾಭಾಜಪಾ ಪ್ರಧಾನ ಕಾರ್ಯದರ್ಶಿಗಳು ನೇತೃತ್ವ ವಹಿಸಲಿದ್ದಾರೆ.

