
ಬೆಳ್ತಂಗಡಿ; ಆರು ತಿಂಗಳ ಹಿಂದೆ ಶಾಂತಿವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಯನ್ನು ವರ್ಷಾ ಎಸ್. (26) ಎಂದು
ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಹೇಮಾ ಎಂಬವರು
ಶಾಂತಿವನಕ್ಕೆ ಚಿಕಿತ್ಸೆಗೆಂದು ಬಂದಿದ್ದರು. ಈ ವೇಳೆ ಅವರ ಬ್ಯಾಗಿನಿಂದ 80ಗ್ರಾಂ ತೂಕದ ಚಿನ್ನದ ಸರ
ಕಳ್ಳತನವಾಗಿತ್ತು. ಈ ಬಗ್ಗೆ ಅವರು ಧರ್ಮಸ್ಥಳ
ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತನಿರೀಕ್ಷಕ ಶಿವಕುಮಾರ್ ಹಾಗೂ ಧರ್ಮಸ್ಥಳ ಪಿ.ಎಸ್.ಐ ಅನಿಲ್ ಕುಮಾರ್ ನೇತೃತ್ವದ ತಂಡ ಬೆಂಗಳೂರಿನಲ್ಲಿದ್ದ ಆರೋಪಿ ವರ್ಷಾ ಎಸ್. ಎಂಬಾಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆಕೆಯಿಂದ 65 ಗ್ರಾಂ ತೂಕದ ಸರವನ್ನು ವಶಪಡಿಸಿಕೊಂಡಿದ್ದಾರೆ.

