ದಸರಾ ಉದ್ಘಾಟನಾ ವಿವಾದ: ಪ್ರತಾಪ್ ಸಿಂಹ ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್

ದಸರಾ ಉದ್ಘಾಟನಾ ವಿವಾದ: ಪ್ರತಾಪ್ ಸಿಂಹ ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್

ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಅತಿಥಿಯಾಗಿ ಬುಕ್ಕರ್ ಪ್ರಶಸ್ತಿ ಪುರಸ್ಕೃತ ಬರಹಗಾರ್ತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

ಸರ್ಕಾರ ಯಾರನ್ನು ಆಹ್ವಾನಿಸಬೇಕು ಎಂಬುದು ಸಂಪೂರ್ಣವಾಗಿ ಆಡಳಿತದ ಹಕ್ಕಾಗಿದ್ದು, ಅಂತಹ ನಿರ್ಧಾರಗಳನ್ನು ಸಾರ್ವಜನಿಕ ಹಿತಾಸ್ತಿ ಅರ್ಜಿಯ ಮೂಲಕ ಪ್ರಶ್ನಿಸಲು ಸಾಧ್ಯವಿಲ್ಲವೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ತೀರ್ಪಿನೊಂದಿಗೆ ಬಾನು ಮುಷ್ತಾಕ್ ಅವರ ಆಹ್ವಾನ ಕುರಿತ ವಿವಾದಕ್ಕೆ ತೆರೆ ಬಿದ್ದಂತಾಗಿದೆ.

ಅಪರಾಧ ರಾಜ್ಯ ರಾಷ್ಟ್ರೀಯ