ದಸರಾ ರಜೆ ವಿಸ್ತರಣೆ: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ – ಸಿಎಂ ಸಿದ್ಧರಾಮಯ್ಯ ಘೋಷಣೆ

ದಸರಾ ರಜೆ ವಿಸ್ತರಣೆ: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ – ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು (ಅ.07): ರಾಜ್ಯದ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲು ಸರ್ಕಾರವು ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ ತೀರ್ಮಾನವನ್ನು ಘೋಷಿಸಿದ್ದಾರೆ.

ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದರಿಂದ, ಪಾಠ ಬೋಧನೆ ಹಾಗೂ ಸಮೀಕ್ಷೆ ಎರಡನ್ನೂ ನಿರ್ವಹಿಸುವುದು ಕಷ್ಟವಾಗುತ್ತಿದೆ ಎಂದು ಶಿಕ್ಷಕರ ಸಂಘ ಸರ್ಕಾರದ ಗಮನಕ್ಕೆ ತಂದಿತ್ತು. ಅವರ ಮನವಿಯನ್ನು ಪರಿಗಣಿಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ಇಲಾಖೆಗೆ ರಜೆ ವಿಸ್ತರಿಸುವ ಆದೇಶ ನೀಡಿದರು.

ಸಮೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ

ಸೆಪ್ಟೆಂಬರ್ 22ರಂದು ಆರಂಭವಾದ ಹಿಂದುಳಿದ ವರ್ಗಗಳ ಸಮೀಕ್ಷೆಯನ್ನು ಅಕ್ಟೋಬರ್ 7ರೊಳಗೆ ಮುಗಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ ಪ್ರಗತಿ ತೃಪ್ತಿಕರವಾಗಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 97ರಷ್ಟು ಕಾರ್ಯ ಪೂರ್ಣಗೊಂಡಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇಕಡಾ 60ರಷ್ಟೇ ಪ್ರಗತಿ ದಾಖಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

10 ದಿನಗಳ ಹೆಚ್ಚುವರಿ ಕಾಲಾವಕಾಶ

ರಾಜ್ಯಾದ್ಯಂತ ಸುಮಾರು 1.60 ಲಕ್ಷ ಸಿಬ್ಬಂದಿ — ಅದರಲ್ಲಿ 1.20 ಲಕ್ಷ ಶಿಕ್ಷಕರು — ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಶಿಕ್ಷಕರ ಸಂಘಗಳು ಕನಿಷ್ಠ 10 ದಿನಗಳ ಹೆಚ್ಚುವರಿ ಸಮಯ ನೀಡುವಂತೆ ಮನವಿ ಸಲ್ಲಿಸಿದ್ದು, ಸರ್ಕಾರವು ಶಾಶ್ವತ ಹಿಂದುಳಿದ ಆಯೋಗದ ಜೊತೆ ಚರ್ಚಿಸಿ ರಜೆಯನ್ನು ವಿಸ್ತರಿಸಿದೆ. ನಾಳೆಯಿಂದ ಅಕ್ಟೋಬರ್ 18ರವರೆಗೆ ಶಾಲೆಗಳಿಗೆ ರಜೆ ಮುಂದುವರಿಯಲಿದೆ.

ದ್ವಿತೀಯ ಪಿಯುಸಿ ಶಿಕ್ಷಕರಿಗೆ ವಿನಾಯಿತಿ

ದ್ವಿತೀಯ ಪಿಯುಸಿ ಮದ್ಯಂತರ ಪರೀಕ್ಷೆಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ಸಮೀಕ್ಷಾ ಕಾರ್ಯದಿಂದ ವಿನಾಯಿತಿ ಪಡೆಯಲಿದ್ದಾರೆ. ಇತರ ಶಿಕ್ಷಕರು ರಜೆ ಅವಧಿಯಲ್ಲಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಮುಂದಾಗಬೇಕಾಗಿದೆ.

ರಾಜ್ಯ ಶೈಕ್ಷಣಿಕ