ಭಾರತ ಹವಾಮಾನ ಇಲಾಖೆ (IMD) ಇಂದು ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಮಧ್ಯ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಕೊಂಕಣ, ಗೋವಾ, ಲಕ್ಷದ್ವೀಪ, ತಮಿಳುನಾಡು, ಪುಡುಚೇರಿ ಹಾಗೂ ಕಾರೈಕಾಲ್ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಅದೇ ಸಮಯದಲ್ಲಿ, ಬಿಹಾರ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಮುಂದಿನ ಎರಡು ರಿಂದ ಮೂರು ದಿನಗಳವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹವಾಮಾನ ತಜ್ಞರ ಪ್ರಕಾರ, ದಕ್ಷಿಣ ಮತ್ತು ಈಶಾನ್ಯ ಭಾಗಗಳಲ್ಲಿ ವಾಯುಮಂಡಲದ ಅಸ್ಥಿರತೆ ಹೆಚ್ಚುತ್ತಿರುವುದರಿಂದ ಮಳೆಯ ಪ್ರಮಾಣ ಹೆಚ್ಚು ಇರಬಹುದು. ನಾಗರಿಕರು ಹಾಗೂ ರೈತರಿಗೆ ಎಚ್ಚರಿಕೆಯಿಂದ ಇರಲು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಲಹೆ ನೀಡಿದೆ.

