ಪುತ್ತೂರು ತಾಲೂಕಿನ ಕೊಂಬೆಟ್ಟು ಮೈದಾನದಲ್ಲಿ ನಡೆದ ‘ಅಶೋಕ ಜನಮನ – 2025’ ಕಾರ್ಯಕ್ರಮದಲ್ಲಿ ಭಾರೀ ಜನ ಸೇರಿದ್ದು ನೂಕುನುಗ್ಗಲು ಉಂಟಾಗಿ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡು ಹಲವು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ರೈ ಎಸ್ಟೇಟ್ ಎಜುಕೇಶನ್ ಹಾಗೂ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿತ್ತು. ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ತಟ್ಟೆ ಹಾಗೂ ವಸ್ತ್ರ ವಿತರಣೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದನ್ನು ಉದ್ಘಾಟಿಸಿದರು.

