ಕಾಂಗ್ರೆಸ್ ನಾಯಕ,ಮಾಜಿ ಸಚಿವ ಎಚ್‌ವೈ ಮೇಟಿ ನಿಧನ

ಕಾಂಗ್ರೆಸ್ ನಾಯಕ,ಮಾಜಿ ಸಚಿವ ಎಚ್‌ವೈ ಮೇಟಿ ನಿಧನ

ಬೆಂಗಳೂರು (ನ.4): ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ಎಚ್‌ವೈ ಮೇಟಿ ಇಂದು (ಮಂಗಳವಾರ) ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದರು.

79 ವರ್ಷದ ಎಚ್‌ವೈ ಮೇಟಿ ಅವರು ರಾಜಕೀಯದಲ್ಲಿ ನಾಲ್ಕು ದಶಕಗಳ ಕಾಲ ಸಕ್ರಿಯರಾಗಿದ್ದು, ಒಟ್ಟು ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಅವರು 1989, 1992 ಮತ್ತು 2004ರಲ್ಲಿ ಗಳೇದಗುಡ್ಡ ಕ್ಷೇತ್ರದಿಂದ ಹಾಗೂ 2013 ಮತ್ತು 2023ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. 2013ರಲ್ಲಿ ಅವರು ಅಬಕಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಆದರೆ 2016ರಲ್ಲಿ ಅಶ್ಲೀಲ ಸಿಡಿ ಪ್ರಕರಣದ ವಿವಾದ ಉಂಟಾದ ನಂತರ ಡಿಸೆಂಬರ್‌ 7ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಿರಿಯ ನಾಯಕ ಎಚ್‌ವೈ ಮೇಟಿ ಅವರ ನಿಧನಕ್ಕೆ ರಾಜ್ಯದ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ರಾಜ್ಯ