ನವದೆಹಲಿ, ನವೆಂಬರ್ 12: ಭೂತಾನ್ ಪ್ರವಾಸದಿಂದ ಭಾರತಕ್ಕೆ ವಾಪಸಾದ ತಕ್ಷಣ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾಗಲು ನೇರವಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ತೆರಳಿದರು.

ಮೋದಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳೊಂದಿಗೆ ಮಾತುಕತೆ ನಡೆಸಿ ಅವರ ಶೀಘ್ರ ಗುಣಮುಖತೆಯನ್ನು ಹಾರೈಸಿದರು. ಈ ಸಂದರ್ಭದಲ್ಲಿ ವೈದ್ಯರು ಹಾಗೂ ಉನ್ನತ ಅಧಿಕಾರಿಗಳು ಸ್ಫೋಟದ ನಂತರದ ಸ್ಥಿತಿಗತಿಗಳ ಬಗ್ಗೆ ಪ್ರಧಾನಿಗೆ ವಿವರಿಸಿದರು.

