ಕನ್ನಡ ನಾಡಿನ ಹೆಮ್ಮೆಯ ಸಾಧಕಿ, ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಇಹಲೋಕ ತ್ಯಜಿಸಿದ್ದಾರೆ. ನವೆಂಬರ್ 2ರಿಂದ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರು 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರ ಜೀವನದ ಹಾದಿ ಸರಳವಾದರೂ ಅದ್ಭುತ ಸಾಧನೆಯಿಂದ ಕೂಡಿತ್ತು. ನಂತರ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಅವರು ವಿವಾಹವಾಗಿದರು. ದಂಪತಿಗೆ ಮಕ್ಕಳಾಗದ ಕಾರಣ, ತಮ್ಮ ದುಃಖವನ್ನು ಮರೆಯಾಗಿಸಲು ಮರಗಳೆಡೆಗೆ ತಿರುಗಿದ ತಿಮ್ಮಕ್ಕ ಅವರು ರಾಜ್ಯ ಹೆದ್ದಾರಿ 99ರ ಕುದೂರಿನಿಂದ ಹುಲಿಕಲ್ ಮಾರ್ಗವರೆಗೆ ಒಂದೇ ಸಾಲಿನಲ್ಲಿ ನೂರಾರು ಆಲದ ಮರಗಳನ್ನು ನೆಟ್ಟು ಪೋಷಣೆ ಮಾಡಿದರು.

