ಪುತ್ತೂರು (ನ.17): ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಬಿ. ಶ್ರೀಧರ ನಾಯ್ಕ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಮಾತ್ರವೇ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದ ಅವರು, ಅನಾರೋಗ್ಯದಿಂದ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ (ನ. 16) ರಂದು ಇಹ ಲೋಕ ಯಾತ್ರೆ ಮುಗಿಸಿದ್ದಾರೆ.

