ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ — ರಾಜ್ಯ ಮಟ್ಟ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ — ರಾಜ್ಯ ಮಟ್ಟ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ನವೆಂಬರ್ 20 ರಂದು ಹಾವೇರಿಯಲ್ಲಿ ನಡೆದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಪದವಿಪೂರ್ವ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ–ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ ತೃತೀಯ ಸ್ಥಾನ ಗಳಿಸಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.


ಅಜ್ಜಾವರ ಗ್ರಾಮದ ಶ್ರೀ ತೀರ್ಥರಾಮ ಮುಡೂರು ಮತ್ತು ಶ್ರೀಮತಿ ಪೂರ್ಣಿಮಾ ಎ. ಜೇ. ಅವರ ಪುತ್ರಿಯಾಗಿರುವ ಕು. ಕ್ಷಮಾ, ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ನವೆಂಬರ್ 2 ರಂದು ತುಮಕೂರಿನಲ್ಲಿ ರಾಜ್ಯೋತ್ಸವದ ಅಂಗವಾಗಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಮಾಲ್ಡೀವ್ಸ್‌ನಲ್ಲಿ ನಡೆಯುವ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಅವರ ಈ ಸಾಧನೆ ಕಾಲೇಜಿನ ಗೌರವವನ್ನು ಮತ್ತಷ್ಟು ಹೆಚ್ಚಿಸಿದ್ದು, ಸಂಸ್ಥೆಯ ವಿದ್ಯಾರ್ಥಿ ಸಮುದಾಯಕ್ಕೆ ಪ್ರೇರಣೆಯಾಗಿದೆ.

ಕ್ರೀಡೆ ರಾಜ್ಯ