ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯ ಮೇರೆಗೆ, ಮಳೆಗಾಲದ ನಂತರ ರಸ್ತೆಗಳಲ್ಲಿ ಉಂಟಾಗಿರುವ ಆಳವಾದ ಹೊಂಡಗಳನ್ನು ಮುಚ್ಚುವ ತುರ್ತು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮುಂದಿನ ಮೂರು ದಿನಗಳ ಒಳಗೆ ಕೆಲಸವನ್ನು ಕಡ್ಡಾಯವಾಗಿ ಮುಗಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ.


