ನವದೆಹಲಿ(ಡಿ. 6): ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸ್ನ ಆರ್ಥಿಕ ಅಪರಾಧ ವಿಭಾಗ (EOW), ಡಿಕೆ ಶಿವಕುಮಾರ್ ಅವರಿಂದ ವಿವರವಾದ ಹಣಕಾಸು ಮತ್ತು ವಹಿವಾಟುಗಳ ಮಾಹಿತಿಯನ್ನು ಕೋರಿದೆ.
ಡಿಕೆಶಿ ಅವರು ಡಿಸೆಂಬರ್ 19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಅಥವಾ ಕೋರಲಾದ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಈ ಹಿಂದೆ, ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ, ಡಿಕೆ ಶಿವಕುಮಾರ್ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಮತ್ತು ಯಂಗ್ ಇಂಡಿಯನ್ ಸಂಸ್ಥೆಗಳಿಗೆ ವೈಯಕ್ತಿಕವಾಗಿ ₹25 ಲಕ್ಷ ಹಾಗೂ ಟ್ರಸ್ಟ್ ಮೂಲಕ ಸುಮಾರು ₹2 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಉಲ್ಲೇಖಿಸಿತ್ತು. ಡಿ.ಕೆ. ಸುರೇಶ್ ಅವರು ಕೂಡ ಯಂಗ್ ಇಂಡಿಯನ್ ಸಂಸ್ಥೆಗೆ ₹25 ಲಕ್ಷ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

