ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರಿ ಆದೇಶ ರದ್ದುಗೊಳಿಸಿದ ಹೈಕೋರ್ಟ್: ಸಂಸದ ತೇಜಸ್ವಿ ಸೂರ್ಯ ಸಂತಸ

ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರಿ ಆದೇಶ ರದ್ದುಗೊಳಿಸಿದ ಹೈಕೋರ್ಟ್: ಸಂಸದ ತೇಜಸ್ವಿ ಸೂರ್ಯ ಸಂತಸ

ಬೆಂಗಳೂರು(ಡಿ. 11): ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ (PMBJP) ಕೇಂದ್ರಗಳನ್ನು ಮುಚ್ಚುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ರದ್ದುಗೊಳಿಸಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಬುಧವಾರ ತಿಳಿಸಿದ್ದಾರೆ.

ಈ ಮೂಲಕ ಬಡವರಿಗೆ ಅಗ್ಗದ ದರದಲ್ಲಿ ಔಷಧಗಳನ್ನು ಪೂರೈಸುವ ಮಹತ್ವದ ಜನೌಷಧಿ ಕೇಂದ್ರಗಳು ಮುಂದುವರಿಯಲು ಅನುಮತಿ ದೊರೆತಂತಾಗಿದೆ.

“ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರ್ಕಾರಿ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತಿದೆ. ನಮ್ಮ ಕಾನೂನು ಕಚೇರಿಯು ಈ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಈ ಹೋರಾಟವನ್ನು ಯಶಸ್ವಿಯಾಗಿ ಮುನ್ನಡೆಸಿದ ಯುವ ವಕೀಲ ಅನಿರುದ್ಧ್ ಕುಲಕರ್ಣಿ ಮತ್ತು ಅವರ ತಂಡಕ್ಕೆ ಅಭಿನಂದನೆಗಳು,” ಎಂದು ಸಂಸದ ತೇಜಸ್ವಿ ಸೂರ್ಯ ಅವರು ‘X’ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಬಡವರ ₹ 30,000 ಕೋಟಿ ಉಳಿತಾಯಕ್ಕೆ ನೆರವುಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆ ಅಡಿಯಲ್ಲಿ ದೇಶಾದ್ಯಂತ ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.ಕಳೆದ 10 ವರ್ಷಗಳ ಅವಧಿಯಲ್ಲಿ ಈ ಕೇಂದ್ರಗಳು ಬಡವರಿಗೆ ಕೈಗೆಟುಕುವ ದರದ ಜೆನೆರಿಕ್ ಔಷಧಿಗಳನ್ನು ಒದಗಿಸುವ ಮೂಲಕ ₹ 30,000 ಕೋಟಿಗೂ ಹೆಚ್ಚು ವೈದ್ಯಕೀಯ ವೆಚ್ಚವನ್ನು ಉಳಿಸಲು ಸಹಾಯ ಮಾಡಿವೆ ಎಂದು ತೇಜಸ್ವಿ ಸೂರ್ಯ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ ರಾಜ್ಯ