ಕರ್ನಾಟಕದಲ್ಲಿ 2 ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂ.ಬಿ.ಪಾಟೀಲ್

ಕರ್ನಾಟಕದಲ್ಲಿ 2 ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂ.ಬಿ.ಪಾಟೀಲ್

ಬೆಂಗಳೂರು: ರಾಜ್ಯದ ಪ್ಲಾಸ್ಟಿಕ್ ವಲಯದ ಬೆಳವಣಿಗೆಗೆ ಉತ್ತೇಜನ ನೀಡಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಮಂಗಳೂರು ಹಾಗೂ ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಪ್ಲಾಸ್ಟಿಕ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಶನಿವಾರ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಪಾಲಿಮರ್ (Polymer) ಮತ್ತು ಪ್ಲಾಸ್ಟಿಕ್ಸ್ ಉದ್ಯಮಗಳಿಗೆ ಅಗತ್ಯವಾದ ನುರಿತ ಮಾನವ ಸಂಪನ್ಮೂಲವನ್ನು ಒದಗಿಸಲು ಹಾಗೂ ಸಂಶೋಧನೆಯನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ, ಮಂಗಳೂರು ಪ್ಲಾಸ್ಟಿಕ್ ಪಾರ್ಕ್‌ನಲ್ಲಿ ಕೇಂದ್ರೀಯ ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (CIPET) ನ ಹೊಸ ಕ್ಯಾಂಪಸ್ ಅನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಪ್ಲಾಸ್ಟಿಕ್ ವಲಯವು ದೇಶದ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದ್ದು, ಪ್ರಸ್ತುತ ಸುಮಾರು 40 ಲಕ್ಷ ಜನರಿಗೆ ಉದ್ಯೋಗ ನೀಡಿದೆ. ಮುಂದಿನ ಒಂದು ವರ್ಷದಲ್ಲಿ ಈ ವಲಯದಲ್ಲಿ 15 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಈ ಪಾರ್ಕ್‌ಗಳ ಮೂಲಕ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎಂದು ಎಂ.ಬಿ. ಪಾಟೀಲ್ ತಿಳಿಸಿದರು.

ಉದ್ಯೋಗ ರಾಜ್ಯ