ಬುರ್ಖಾ ಧರಿಸದೆ ಹೊರಹೋದದ್ದಕ್ಕೆ ಪತ್ನಿ, ಇಬ್ಬರು ಮಕ್ಕಳ ಹತ್ಯೆ – ಮನೆಯಲ್ಲೇ ಹೂತು ಹಾಕಿದ ಪಾಪಿ ಪತಿ!

ಬುರ್ಖಾ ಧರಿಸದೆ ಹೊರಹೋದದ್ದಕ್ಕೆ ಪತ್ನಿ, ಇಬ್ಬರು ಮಕ್ಕಳ ಹತ್ಯೆ – ಮನೆಯಲ್ಲೇ ಹೂತು ಹಾಕಿದ ಪಾಪಿ ಪತಿ!

ಲಖ್ನೌ: ಉತ್ತರ ಪ್ರದೇಶದಲ್ಲಿ ಕೇವಲ ಬುರ್ಖಾ ಧರಿಸದೆ ಹೊರಗೆ ಹೋದರು ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿಯನ್ನು ಫಾರೂಕ್ ಎಂದು ಗುರುತಿಸಲಾಗಿದ್ದು, ಈತ ಕೊಲೆಯ ಬಳಿಕ ಶವಗಳನ್ನು ಮನೆಯಲ್ಲೇ ಹೂತು ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಪತ್ನಿ ಮತ್ತು ಮಕ್ಕಳು ಬುರ್ಖಾ ಧರಿಸದೆ ಮನೆಯಿಂದ ಹೊರಗೆ ಹೋಗಿದ್ದರಿಂದ ತೀವ್ರ ಆಕ್ರೋಶಗೊಂಡ ಫಾರೂಕ್ ಈ ಘೋರ ಕೃತ್ಯ ಎಸಗಿದ್ದಾನೆ. ಆರೋಪಿಯು ಮೂಲಭೂತವಾದಿ ಧೋರಣೆ ಹೊಂದಿದ್ದು, ಮಹಿಳೆಯರ ಉಡುಪಿನ ವಿಚಾರದಲ್ಲಿ ಅತ್ಯಂತ ಕಠಿಣವಾಗಿ ನಡೆದುಕೊಳ್ಳುತ್ತಿದ್ದ ಎನ್ನಲಾಗಿದೆ.

ಕುಟುಂಬ ಸದಸ್ಯರು ನಾಪತ್ತೆಯಾಗಿರುವ ಬಗ್ಗೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಮನೆಯ ಆವರಣದಲ್ಲಿ ಶವಗಳನ್ನು ಹೂತು ಹಾಕಿರುವುದು ಪತ್ತೆಯಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಅಪರಾಧ ರಾಷ್ಟ್ರೀಯ