ಸ್ಪೀಕರ್ ಆಯೋಜಿಸಿದ್ದ ಚಹಾಕೂಟದಲ್ಲಿ ಪ್ರಧಾನಿ ಮೋದಿ-ಪ್ರಿಯಾಂಕಾ ಗಾಂಧಿ  : ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಚಹಾಕೂಟ

ಸ್ಪೀಕರ್ ಆಯೋಜಿಸಿದ್ದ ಚಹಾಕೂಟದಲ್ಲಿ ಪ್ರಧಾನಿ ಮೋದಿ-ಪ್ರಿಯಾಂಕಾ ಗಾಂಧಿ : ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಚಹಾಕೂಟ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು (ಶುಕ್ರವಾರ) ಆಯೋಜಿಸಿದ್ದ ಸಾಂಪ್ರದಾಯಿಕ ಚಹಾಕೂಟದಲ್ಲಿ ಒಂದು ಅಪರೂಪದ ಕ್ಷಣ ಕಂಡುಬಂದಿತು. ರಾಜಕೀಯವಾಗಿ ಪರಸ್ಪರ ವಿರೋಧಿಗಳಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅತ್ಯಂತ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು.

ಕೇರಳದ ವಯನಾಡ್ ಸಂಸದೆಯಾಗಿರುವ ಪ್ರಿಯಾಂಕಾ ಗಾಂಧಿ, ತಮ್ಮ ಕ್ಷೇತ್ರದ ಜನರೊಂದಿಗೆ ಉತ್ತಮವಾಗಿ ಸಂವಹನ ನಡೆಸಲು ತಾವು ಮಲೆಯಾಳಂ ಭಾಷೆಯನ್ನು ಕಲಿಯುತ್ತಿರುವುದಾಗಿ ಪ್ರಧಾನಿ ಮೋದಿಯವರ ಬಳಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಕ್ಷೇತ್ರದ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಭಾಷೆ ಮುಖ್ಯ ಎಂಬ ಉದ್ದೇಶದಿಂದ ಈ ಪ್ರಯತ್ನ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಿಯಾಂಕಾ ಅವರು ಪ್ರಧಾನಿಯವರ ಇತ್ತೀಚಿನ ಆಫ್ರಿಕಾ ಮತ್ತು ಮಧ್ಯಪ್ರಾಚ್ಯದ ಮೂರು ರಾಷ್ಟ್ರಗಳ ಪ್ರವಾಸದ ಬಗ್ಗೆಯೂ ವಿಚಾರಿಸಿದರು. ಉಭಯ ನಾಯಕರು ಸಂಸತ್ತಿನ ಸಂಕೀರ್ಣದಲ್ಲಿ ನಗುನಗುತಲೇ ಮಾತನಾಡುತ್ತಿದ್ದುದು ಎಲ್ಲರ ಗಮನ ಸೆಳೆಯಿತು. ವಿವಿಧ ಪಕ್ಷಗಳ ಪ್ರಮುಖ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ ರಾಷ್ಟ್ರೀಯ