ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಭದ್ರತೆ ಮತ್ತು ಸುಧಾರಣಾ ಕ್ರಮಗಳ ಪರಿಶೀಲನೆ

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಭದ್ರತೆ ಮತ್ತು ಸುಧಾರಣಾ ಕ್ರಮಗಳ ಪರಿಶೀಲನೆ

ಮಂಗಳೂರು: ರಾಜ್ಯದ ಕಾರಾಗೃಹಗಳ ಭದ್ರತೆ ಮತ್ತು ಸುಧಾರಣಾ ಕ್ರಮಗಳ ಪರಾಮರ್ಶೆಯ ಭಾಗವಾಗಿ, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಎಡಿಜಿಪಿ (DGP) ಅಲೋಕ್ ಕುಮಾರ್ ಅವರು ಮಂಗಳವಾರ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಇರುವ ಎಲ್ಲಾ ಕಾರಾಗೃಹಗಳನ್ನು ಹಂತ ಹಂತವಾಗಿ ಪರಿಶೀಲಿಸಲಾಗುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿಯೇ ಮಂಗಳೂರು ಜೈಲಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು.

ಭದ್ರತೆಗೆ ವಿಶೇಷ ಆದ್ಯತೆ​: ಮಂಗಳೂರು ಜೈಲು ಆಯಕಟ್ಟಿನ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ಇರುವುದರಿಂದ ಇಲ್ಲಿನ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜೈಲಿನ ಒಳಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಿಸ್ತು ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಶಿಸ್ತು ಉಲ್ಲಂಘಿಸುವ ಕೈದಿಗಳ ವರ್ಗಾವಣೆ: ಜೈಲಿನ ನಿಯಮಗಳನ್ನು ಗಾಳಿಗೆ ತೂರಿ ಶಿಸ್ತು ಉಲ್ಲಂಘಿಸುವ ಹಾಗೂ ಇತರ ಕೈದಿಗಳಿಗೆ ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಂತಹ ಕಿಡಿಗೇಡಿ ಕೈದಿಗಳನ್ನು ಗುರುತಿಸಿ ಈಗಾಗಲೇ ರಾಜ್ಯದ ಇತರೆ ಜಿಲ್ಲೆಗಳ ಕಾರಾಗೃಹಗಳಿಗೆ ವರ್ಗಾಯಿಸಲಾಗಿದೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದರು.

ಅಪರಾಧ ರಾಜ್ಯ