ಬಳ್ಳಾರಿಯಲ್ಲಿ ಬ್ಯಾನರ್ ಕಿರಿಕ್: ರಾಜಕೀಯ ಸಂಘರ್ಷಕ್ಕೆ ಒಬ್ಬ ಬಲಿ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬಳ್ಳಾರಿಯಲ್ಲಿ ಬ್ಯಾನರ್ ಕಿರಿಕ್: ರಾಜಕೀಯ ಸಂಘರ್ಷಕ್ಕೆ ಒಬ್ಬ ಬಲಿ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬಳ್ಳಾರಿ: ನಗರದಲ್ಲಿ ಬ್ಯಾನರ್ ಅಳವಡಿಸುವ ವಿಚಾರವಾಗಿ ಆರಂಭವಾದ ಸಣ್ಣ ಕಿತ್ತಾಟ, ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವಿನ ಭೀಕರ ಸಂಘರ್ಷಕ್ಕೆ ಕಾರಣವಾಗಿದೆ. ಗುರುವಾರ ನಡೆದ ಈ ಘಟನೆಯಲ್ಲಿ ಗುಂಡೇಟಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಗಣಿ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಘಟನೆಯ ಹಿನ್ನೆಲೆ:​ ಹೊಸ ವರ್ಷದ ಆಚರಣೆ ಹಾಗೂ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ತಿರುಗಿ ಎರಡೂ ಗುಂಪುಗಳು ಪರಸ್ಪರ ಅಟ್ಯಾಕ್ ಮಾಡಿಕೊಂಡಿವೆ. ಈ ವೇಳೆ ಖಾಸಗಿ ಗನ್ ಮ್ಯಾನ್ ಒಬ್ಬರು ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಆರಂಭದಲ್ಲಿ ಸಾವು-ನೋವಿನ ಬಗ್ಗೆ ಗೊಂದಲವಿತ್ತಾದರೂ, ಶುಕ್ರವಾರ ಬೆಳಿಗ್ಗೆ ಪೊಲೀಸರು ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಇಂದು (ಶುಕ್ರವಾರ) ಬಳ್ಳಾರಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಭದ್ರತೆ ಮುಂದುವರಿಸಲಾಗಿದೆ. “ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ,” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪರಾಧ ರಾಜಕೀಯ ರಾಜ್ಯ