ಐಪಿಎಲ್ 2026: ಮುಸ್ತಫಿಜುರ್ ರೆಹಮಾನ್ ಬಿಡುಗಡೆ ಮಾಡುವಂತೆ ಕೆಕೆಆರ್‌ಗೆ ಬಿಸಿಸಿಐ ಸೂಚನೆ

ಐಪಿಎಲ್ 2026: ಮುಸ್ತಫಿಜುರ್ ರೆಹಮಾನ್ ಬಿಡುಗಡೆ ಮಾಡುವಂತೆ ಕೆಕೆಆರ್‌ಗೆ ಬಿಸಿಸಿಐ ಸೂಚನೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿ ಆರಂಭಕ್ಕೂ ಮುನ್ನವೇ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕೆಕೆಆರ್ ಫ್ರಾಂಚೈಸಿಗೆ ಸೂಚನೆ ನೀಡಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಇತ್ತೀಚಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ. ಮುಂಬರುವ ಐಪಿಎಲ್ ಸೀಸನ್‌ನಲ್ಲಿ ಬಾಂಗ್ಲಾದೇಶದ ಆಟಗಾರರ ಭಾಗವಹಿಸುವಿಕೆಯ ಬಗ್ಗೆ ಇದ್ದ ಗೊಂದಲಕ್ಕೆ ಈ ಬೆಳವಣಿಗೆ ಪುಷ್ಟಿ ನೀಡಿದೆ.

ಹರಾಜಿನಲ್ಲಿ ಭಾರಿ ಮೊತ್ತಕ್ಕೆ ಮಾರಾಟವಾಗಿದ್ದ ‘ಫಿಜ್’​ ಕಳೆದ ತಿಂಗಳು ನಡೆದ ಆಟಗಾರರ ಹರಾಜಿನಲ್ಲಿ 30 ವರ್ಷದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ ಅವರಿಗಾಗಿ ಭಾರಿ ಪೈಪೋಟಿ ನಡೆದಿತ್ತು.

ದೀರ್ಘಕಾಲದ ಬಿಡ್ಡಿಂಗ್ ಯುದ್ಧದ ನಂತರ ಕೆಕೆಆರ್ ಇವರನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಆದರೆ ಈಗ ಬಿಸಿಸಿಐ ಸೂಚನೆಯಿಂದಾಗಿ ಈ ಒಪ್ಪಂದ ರದ್ದಾಗುವ ಹಂತಕ್ಕೆ ತಲುಪಿದೆ.

ಕೆಕೆಆರ್‌ಗೆ ಬದಲಿ ಆಟಗಾರನ ಅವಕಾಶ ಮುಸ್ತಫಿಜುರ್ ರೆಹಮಾನ್ ತಂಡದಿಂದ ಹೊರಗುಳಿಯುವುದರಿಂದ ಕೆಕೆಆರ್ ಬೌಲಿಂಗ್ ವಿಭಾಗಕ್ಕೆ ಆಘಾತ ಉಂಟಾಗಿದೆ. ಆದಾಗ್ಯೂ, ನಿಯಮದಂತೆ ಕೆಕೆಆರ್ ತಂಡಕ್ಕೆ ಅವರ ಸ್ಥಾನದಲ್ಲಿ ಮತ್ತೊಬ್ಬ ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಳ್ಳಲು ಬಿಸಿಸಿಐ ಅನುಮತಿ ನೀಡಿದೆ.

ಸದ್ಯಕ್ಕೆ ಬಾಂಗ್ಲಾದೇಶದ ಇತರ ಆಟಗಾರರ ಐಪಿಎಲ್ ಭವಿಷ್ಯದ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಇದು ಕೆಕೆಆರ್ ಅಭಿಮಾನಿಗಳಲ್ಲಿ ಮತ್ತು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ