ಮಂಗಳೂರು: ಕನ್ಯಾಡಿಯ ಸೇವಾಭಾರತಿ ತಂಡವು ಮಂಗಳವಾರ (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಭೇಟಿ ಮಾಡಿ, ವಿಕಲಚೇತನರ ಸಬಲೀಕರಣ ಹಾಗೂ ನೂತನ ಪುನಶ್ಚೇತನ ಕೇಂದ್ರದ ಕುರಿತು ಚರ್ಚೆ ನಡೆಸಿತು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ, ಸೇವಾಭಾರತಿ ಸಂಸ್ಥೆಯು ಜಿಲ್ಲೆಯಲ್ಲಿ ಕೈಗೊಳ್ಳುತ್ತಿರುವ ವಿವಿಧ ಸೇವಾಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಮುಖ್ಯವಾಗಿ, ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರಿಗಾಗಿ ಬೆಳ್ತಂಗಡಿ ತಾಲೂಕಿನ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ನೂತನ ಪುನಶ್ಚೇತನ ಕೇಂದ್ರದ (Rehabilitation Center) ಕಟ್ಟಡದ ಕಾಮಗಾರಿಯ ಬಗ್ಗೆ ವಿವರಿಸಿದ ತಂಡವು, ಯೋಜನೆಗೆ ಆಡಳಿತಾತ್ಮಕ ಸಹಕಾರ ನೀಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ ಉಪಸ್ಥಿತರಿದ್ದರು. ಸಂಸ್ಥೆಯ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ದಿವ್ಯಾಂಗರ ಕಲ್ಯಾಣಕ್ಕಾಗಿ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು.

