ಮಂಗಳೂರು: ಕರಾವಳಿ ಭಾಗದ ಬಹುಕಾಲದ ಬೇಡಿಕೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿಸ್ತರಣೆ ಮತ್ತು ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ. ಈ ಯೋಜನೆಗಳ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅನುಮೋದನೆ ನೀಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮೂಲಸೌಕರ್ಯಕ್ಕೆ ಹೆಚ್ಚಿನ ವೇಗ ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, “ಕರಾವಳಿ ಭಾಗದ ರಸ್ತೆ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ. ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡುವ ಜೊತೆಗೆ, ಮಂಗಳೂರು ಬಂದರು ಸಂಪರ್ಕವನ್ನು ವೃದ್ಧಿಸುವುದು ನಮ್ಮ ಗುರಿ. ಈ ಯೋಜನೆಗಳಿಂದ ಆರ್ಥಿಕ ಚಟುವಟಿಕೆಗಳಿಗೆ ಹೊಸ ವೇಗ ಸಿಗಲಿದೆ,” ಎಂದಿದ್ದಾರೆ.

