WPL RCB vs GG: ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ಆರ್‌ಸಿಬಿ: ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ!

WPL RCB vs GG: ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ಆರ್‌ಸಿಬಿ: ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಬ್ಬರದ ಪ್ರದರ್ಶನ ಮುಂದುವರಿಸಿದೆ. ಶುಕ್ರವಾರ ನಡೆದ ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 32 ರನ್‌ಗಳಿಂದ ಮಣಿಸಿದ ಸ್ಮೃತಿ ಮಂಧಾನ ಪಡೆ, ಟೂರ್ನಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ.

ಸಂಕಷ್ಟದಲ್ಲಿ ಆಸರೆಯಾದ ರಾಧಾ-ರಿಚಾ ಜೋಡಿ​ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಕೇವಲ 43 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಮಂಕಾಗಿದ್ದ ತಂಡಕ್ಕೆ ಭಾರತದ ತಾರೆಗಳಾದ ರಾಧಾ ಯಾದವ್ ಮತ್ತು ರಿಚಾ ಘೋಷ್ ಆಸರೆಯಾದರು.

ಶ್ರೇಯಾಂಕ ಪಾಟೀಲ್ ‘ಪಂಚ’ ಪೆಟ್ಟು 183 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್ ಜೈಂಟ್ಸ್ ತಂಡ ಆರ್‌ಸಿಬಿ ಬೌಲರ್‌ಗಳ ದಾಳಿಗೆ ತತ್ತರಿಸಿತು. ಕನ್ನಡಿಗಿ, ಆಫ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಪಡೆಯುವ ಮೂಲಕ ಗುಜರಾತ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ಇಂಗ್ಲೆಂಡ್ ವೇಗಿ ಲಾರೆನ್ ಬೆಲ್ 3 ವಿಕೆಟ್ ಕಿತ್ತರು. ಅಂತಿಮವಾಗಿ ಗುಜರಾತ್ ತಂಡ 18.5 ಓವರ್‌ಗಳಲ್ಲಿ 150 ರನ್‌ಗಳಿಗೆ ಆಲೌಟ್ ಆಯಿತು.

ಕ್ರೀಡೆ ರಾಜ್ಯ ರಾಷ್ಟ್ರೀಯ